ನವದೆಹಲಿ, ಡಿ. 24 (DaijiworldNews/HR): ಟೀಂ ಇಂಡಿಯಾದ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, "ನಾನು ಇಂದು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ. ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯಗೊಳಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ" ಎಂದು ತಿಳಿಸಿದ್ದಾರೆ.
1998ರಲ್ಲಿ ಕೇವಲ 17ನೇ ವಯಸ್ಸಿನಲ್ಲಿ ಕ್ರಿಕೆಟ್ ವೃತ್ತಿಗೆ ಹರ್ಭಜನ್ ಸಿಂಗ್ ಪಾದಾರ್ಪಣೆ ಮಾಡಿದ್ದರು. ಈಗ 23 ವರ್ಷಗಳ ನಂತರ ಅವರು ಕ್ರಿಕೆಟ್ಗೆ ಶಾಶ್ವತವಾಗಿ ವಿದಾಯ ಹೇಳಿದ್ದಾರೆ.