ಮೆಲ್ಬೋರ್ನ್, ಫೆ 05 (DaijiworldNews/KP): ಆಸ್ಟ್ರೇಲಿಯಾ ಕ್ರಿಕೆಟ್ ಜಗತ್ತಿನಲ್ಲಿ ಯಶಸ್ವಿ ಕೋಚ್ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ಅವರು ತಮ್ಮ ಸ್ಥಾನಕ್ಕೆ ದಿಢೀರ್ ರಾಜಿನಾಮೆ ನೀಡಿದ್ದಾರೆ. ಇವರ ಈ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಲ್ಯಾಂಗರ್ ಮೂರು ವರ್ಷಗಳಿಗೂ ಹೆಚ್ಚು ಕಾಲ ಕೋಚ್ ಹುದ್ದೆ ನಿಭಾಯಿಸಿದ್ದು, ಇತ್ತೀಚೆಗೆ ನಡೆದ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಲು ಲ್ಯಾಂಗರ್ ಬಹುಮುಖ್ಯ ಪಾತ್ರ ವಹಿಸಿದ್ದರು.
ಬರೋಬ್ಬರಿ 24 ವರ್ಷಗಳ ಬಳಿಕ ಆಸ್ಟ್ರೇಲಿಯಾ ತಂಡ ಪಾಕ್ ಪ್ರವಾಸ ಕೈಗೊಳ್ಳುತ್ತಿದ್ದು, ಇಲ್ಲಿ ಮೂರು ಟೆಸ್ಟ್ ಪಂದ್ಯ ಹಾಗೂ ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದ್ದು. ಇದಕ್ಕೂ ಮುನ್ನ ಕೋಚ್ ಲ್ಯಾಂಗರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಹಾಯಕ ಕೋಚ್ ಆಗಿದ್ದ ಆಂಡ್ರೂ ಮೆಕ್ಡೊನಾಲ್ಡ್ ತಂಡದ ಕೋಚಿಂಗ್ ಜವಾಬ್ದಾರಿ ಹೊರುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಬಾಲ್ ಟ್ಯಾಂಪರಿಂಗ್ ವಿವಾದದ ಬಳಿಕ ಜಸ್ಟಿನ್ ಲ್ಯಾಂಗರ್ ತಂಡದ ಕೋಚ್ ಹುದ್ದೆ ಅಲಂಕರಿಸಿದ್ದರು.