ನವದೆಹಲಿ, ಫೆ. 08 (DaijiworldNews/SM): ವೆಸ್ಟ್ ಇಂಡೀಸ್ ತಂಡದ ವಿರುದ್ಧದ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಎದುರಾಗಿದ್ದ ಕೊರೋನಾ ಆಘಾತದಿಂದ ಕೊಂಚ ರಿಲೀಫ್ ಸಿಕ್ಕಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಶ್ರೇಯಸ್ ಐಯ್ಯರ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ.
ಭಾರತ ತಂಡದ ನಾಲ್ವರು ಆಟಗಾರರ ಸಹಿತ ಒಟ್ಟು ಆರು ಮಂದಿಗೆ ಕೊರೊನಾವೈರಸ್ ದೃಢಪಟ್ಟಿತ್ತು. ಈ ಪೈಕಿ ಇಬ್ಬರ ವರದಿ ನೆಗೆಟಿವ್ ಆಗಿದೆ. ಶಿಖರ್ ಧವನ್ ಹಾಗೂ ಶ್ರೇಯಸ್ ಐಯ್ಯರ್ ಕೊರೊನಾ ವೈರಸ್ ನೆಗೆಟಿವ್ ವರದಿ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ಆಟಗಾರರು ಅಭ್ಯಾಸ ಪಂದ್ಯಕ್ಕೆ ಮುಂದಾಗಿದ್ದಾರೆ.
ಶಿಖರ್ ಧವನ್, ಶ್ರೇಯಸ್ ಐಯ್ಯರ್ ಮತ್ತು ಋತುರಾಜ್ ಗಾಯಕ್ವಾಡ್ ಹಾಗೂ ತಂಡದ ನಾಲ್ವರು ಸಹಾಯಕ ಸಿಬ್ಬಂದಿಗಳು ಕೊರೊನಾವೈರಸ್ಗೆ ತುತ್ತಾಗಿರುವುದು ದೃಢಪಟ್ಟಿತ್ತು.