ಅಹಮದಾಬಾವ್, ಫೆ. 09 (DaijiworldNews/SM): ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯ ಗೆಲ್ಲುವ ಮೂಲಕ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 2-1 ಅಂತರದ ಮೇಲುಗೈ ಸಾಧಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ 44 ರನ್ ಗಳ ಅಂತರದಿಂದ ಗೆದ್ದುಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಐವತ್ತು ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ 237 ರನ್ ಗಳಿಸಿತು. ಟೀಂ ಇಂಡಿಯಾ ಪರ ರಾಹುಲ್ 49, ಸೂರ್ಯಕುಮಾರ್ ಯಾದವ್ 64 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ತಂಡ 46 ಓವರ್ ಗಳಲ್ಲಿ 193 ರನ್ ಗಳಿಗೆ ಸರ್ವ ಪತನಗೊಂಡಿತು. ಭಾರತೀಯ ಶಿಸ್ತಿನ ಬೌಲಿಂಗ್ ದಾಳಿಗೆ ವಿಂಡೀಸ್ ಬ್ಯಾಟ್ಸ್ ಮನ್ ಗಳ ಆಟ ನಡೆಯಲಿಲ್ಲ. ಅಂತಿಮವಾಗಿ 44 ರನ್ ಗಳ ಅಂತರದ ಸೋಲನುಭವಿಸಿತು.