ಮುಂಬೈ, ಏ 01 (DaijiworldNews/MS): ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಇತಿಹಾಸದಲ್ಲೇ ವೆಸ್ಟ್ ಇಂಡೀಸ್ನ ಡ್ವೇನ್ ಬ್ರಾವೊ ಸರ್ವಶ್ರೇಷ್ಠ ದಾಖಲೆಬರೆದಿದ್ದು ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಬ್ರಾವೊ, ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿದರು.
ರಾಹುಲ್ ಪಡೆಗೆ ಮೊದಲ ಜಯ ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ದಾಖಲೆ ಮುರಿದಿರುವ ಬ್ರಾವೊ, ಈವರೆಗೆ ಒಟ್ಟು 171 ವಿಕೆಟ್ ಗಳಿಸಿದ್ದಾರೆ.
ಐಪಿಎಲ್ನಲ್ಲಿ ಕೇವಲ 5 ಬೌಲರುಗಳು ಮಾತ್ರ 150 ಕ್ಕೂ ಅಧಿಕ ವಿಕೆಟ್ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಲಸಿತ್ ಮಾಲಿಂಗ 170 ವಿಕೆಟ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರು. ಒಟ್ಟಾರೆ ಟಿ20 ಕ್ರಿಕೆಟ್ ದಾಖಲೆ ನೋಡುವುದಾದರೆ, ಡ್ವೇನ್ ಬ್ರಾವೊ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.