ಬರ್ಮಿಂಗ್ಹ್ಯಾಮ್, ಆ 04 (DaijiworldNews/MS): ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದೂವರೆದಿದೆ. ಜೂಡೋ ಹಾಗೂ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದೆ.
ಭಾರತದ ತುಲಿಕಾ ಮಾನ್ ಮಹಿಳಾ ಜೂಡೋ 78 ಕೆಜಿ ವಿಭಾಗದಲ್ಲಿ ಬುಧವಾರ ತಡರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ನಾಲ್ಕು ಬಾರಿ ರಾಷ್ಟ್ರೀಯ ಚಾಂಪಿಯನ್ ಆಗಿರುವ 22 ವರ್ಷದ ತುಲಿಕಾ ಮಾನ್ ಫೈನಲ್ನಲ್ಲಿ ಸ್ಕಾಟ್ಲ್ಯಾಂಡ್ನ ಸಾರಾ ಅಡ್ಲಿಂಗ್ಟನ್ ವಿರುದ್ಧ ಸೋಲು ಅನುಭವಿಸುವ ಮೂಲಕ ಬೆಳ್ಳಿಗೆ ತೃಪ್ತಿಪಟ್ಟಿದ್ದಾರೆ.ಜೂಡೋದಲ್ಲಿ ಭಾರತಕ್ಕೆ ಇದು ಮೂರನೇ ಪದಕವಾಗಿದೆ.
ಇದಲ್ಲದೆ ವೇಟ್ಲಿಫ್ಟರ್ ಗುರ್ದೀಪ್ ಸಿಂಗ್ ಅವರು ಕಂಚಿನ ಪದಕ ಗೆದ್ದಿದ್ದಾರೆ. 26 ವರ್ಷದ ಸಿಂಗ್ 109 ಕೆಜಿ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 26 ಹರೆಯದ ಸಿಂಗ್ ಒಟ್ಟಾರೆಯಾಗಿ 390 ಕೆಜಿ (167 ಕೆಜಿ + 223 ಕೆಜಿ) ಎತ್ತುವ ಮೂಲಕ ಈ ಅತ್ಯುತ್ತಮ ಸಾಧನೆ ಮಾಡಿದ್ದಾರೆ.