ಮುಂಬೈ, ಆ 23 (DaijiworldNews/DB): ಮೊಣಕೈ ಗಾಯದಿಂದ ಬಳಲುತ್ತಿರುವ ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಈ ಬಾರಿ ಯುಎಸ್ ಓಪನ್ ಸ್ಪರ್ಧೆಯಿಂದ ಹೊರಗುಳಿಯಲಿದ್ದಾರೆ.
ಈ ಕುರಿತು ಸಾನಿಯಾ ಮಿರ್ಜಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದು, ಮೊಣಕೈ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಯುಎಸ್. ಪಂದ್ಯಾಟದಲ್ಲಿ ಭಾಗವಹಿಸುತ್ತಿಲ್ಲ. ಕೆಲವು ವಾರಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಎರಡು ವಾರಗಳ ಹಿಂದೆ ಕೆನಡಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ಮೊಣಕೈಗೆ ಗಾಯವಾಗಿತ್ತು. ಹೀಗಾಗಿ ಅವರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವಿಶ್ರಾಂತಿಗಾಗಿ ಅವರು ಯುಎಸ್ ಓಪನ್ ಸ್ಪರ್ಧೆಯಿಂದ ದೂರ ಉಳಿಯಲಿದ್ದಾರೆ.