ದುಬೈ, ಆ 28 (DaijiworldNews/SM): ಇಲ್ಲಿ ನಡೆಯುತ್ತಿರುವ ಏಷ್ಯಕಪ್ ಐಪಿಎಲ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯ ಕುತೂಹಲವನ್ನುಂಟು ಮಾಡಿದೆ. ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಟೀಂ ಇಂಡಿಯಾಗೆ 148 ರನ್ ಗಳ ಗುರಿ ನೀಡಿದೆ.
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ 2022ರ ಎರಡನೇ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದರು. ಈ ಹಿನ್ನೆಲೆಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 147 ರನ್ ಗಳಿಗೆ ಆಲೌಟ್ ಆಯಿತು.
ಪಾಕ್ ಪರ ಬ್ಯಾಟಿಂಗ್ ನಲ್ಲಿ ಮೊಹಮ್ಮದ್ ರಿಜ್ವಾನ್ 43, ಬಾಬರ್ ಅಜಂ 10, ಜಮಾನ್ 10, ಇಫ್ತಿಕರ್ ಅಹ್ಮದ್28, ಧಹನಿ 16 ರನ್ ಗಳಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ 4, ಹಾರ್ದಿಕ್ ಪಾಂಡ್ಯ 3 ಹರ್ಷ್ದೀಪ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ.
ಈ ಹಿಂದೆ ಪಾಕಿಸ್ತಾನವನ್ನು ಭಾರತ 2021 ರ ಐಸಿಸಿ ಪುರುಷರ T20 ವಿಶ್ವಕಪ್ನಲ್ಲಿ ಎದುರುಗೊಂಡಿತ್ತು. ಆಂದಿನ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಅಲ್ಲದೆ ಭಾರತಕ್ಕೆ ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಟೂರ್ನಿಯಲ್ಲಿ ಅದು ಮೊದಲ ಸೋಲುಕೂಡ ಆಗಿತ್ತು. ಇದೀಗ ಭಾರತಕ್ಕೆ ಆ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ದೊರೆತಿದೆ.