ಮಂಗಳೂರು, ನ 17 (DaijiworldNews/DB): ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿದ 14 ರ ವಯೋಮಾನದ ವಿಭಾಗದಲ್ಲಿ ಅಮ್ಟೂರು ಕರಿಂಗಾಣದ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಆಯ್ಕೆಯಾದ ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕ ವಂ| ಫಾ| ಪಾವ್ಲ್ ಪಿಂಟೋ, ಮುಖ್ಯೋಪಾಧ್ಯಾಯ ವಂ|ಫಾ| ಕಿರಣ್ ಮ್ಯಾಕ್ಸಿಮ್ ಪಿಂಟೋ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
ಈ ವಿದ್ಯಾರ್ಥಿಗಳು ನವೆಂಬರ್ 20ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಆಡಲಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಭಾಗವಹಿಸಿದ ಆಂನ್ಸನ್ ಲೂಯಿಸ್ ಹ್ಯಾಮರ್ ಹೆಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಅನ್ಸಾರ್ ಕೊಳಕೆ ತರಬೇತಿನೀಡಿದ್ದಾರೆ.