ಕೊಲಂಬೊ, ಫೆ 26(SM): ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಎರಡು ವರ್ಷಗಳ ಕಾಲ ನಿಷೇಧ ಹೇರಿದೆ.
ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಯಸೂರ್ಯ ಸರಿಯಾಗಿ ಸಹಕಾರ ನೀಡಿರಲಿಲ್ಲ. ಇದೇ ಕಾರಣಕ್ಕಾಗಿ ಅವರಿಗೆ ಎಲ್ಲ ಮಾದರಿಯ ಕ್ರಿಕೆಟ್ ಗಳನ್ನು ಆಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಈ ಆರೋಪಕ್ಕೆ ಸಂಬಂಧಿಸಿದಂತೆ ಐಸಿಸಿಗೆ ಜಯಸೂರ್ಯ ಸರಿಯಾಗಿ ಸಹಕಾರ ನೀಡಿಲ್ಲ ಎಂಬುವುದು ಸದ್ಯ ಅವರ ಮೇಲೆ ಇರುವಂತಹ ಆರೋಪ. ಇನ್ನೊಂದೆಡೆ ಜಯಸೂರ್ಯ ಮೇಲೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನ ನಾಶಪಡಿಸಿದ ಆರೋಪ ಸಹ ಕೇಳಿ ಬಂದಿದೆ. ಹಾಗಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.