ಮುಂಬೈ, ಡಿ 11 (DaijiworldNews/SM): ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಗಾಯಾಳು ನಾಯಕ ರೋಹಿತ್ ಶರ್ಮಾ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಇದರ ಜೊತೆಗೆ ಹಲವು ಬದಲಾವಣೆಗಳನ್ನು ತಂಡದಲ್ಲಿ ಮಾಡಲಾಗಿದೆ.
ಬುಧವಾರದಿಂದ ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿ ಆರಂಭಗೊಳ್ಳಲಿದೆ. ಗಾಯದ ಸಮಸ್ಯೆಯಿಂದಾಗಿ ನಾಯಕ ರೋಹಿತ್ ಶರ್ಮಾ ಅವರು ಮೊದಲ ಟೆಸ್ಟ್ನಿಂದ ಹೊರಗುಳಿಯಲಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್ ನಲ್ಲಿ ಕೆ.ಎಲ್ ರಾಹುಲ್ ನಾಯಕತ್ವ ನಿಭಾಯಿಸಲಿದ್ದಾರೆ. ರೋಹಿತ್ ಸ್ಥಾನಕ್ಕೆ ಅಭಿಮನ್ಯು ಈಶ್ವರನ್ ಅವರನ್ನು ಆಯ್ಕೆ ಮಾಡಲಾಗಿದೆ.
ಉಳಿದಂತೆ ಗಾಯಾಳು ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಅವರನ್ನು ಟೆಸ್ಟ್ ಸರಣಿಯಿಂದಲೇ ಕೈ ಬಿಡಲಾಗಿದೆ. ಅವರ ಸ್ಥಾನಕ್ಕೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ಅವರನ್ನು ತಂಡಕ್ಕೆ ಸೇರಿಕೊಳ್ಳಲು ನಿರ್ಧರಿಸಲಾಗಿದೆ. ಸಮಿತಿಯು ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿದೆ.