ಲಂಡನ್, ಡಿ 14 (DaijiworldNews/DB): ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಆಂಡ್ರ್ಯೂ ಫ್ಲಿಂಟಾಫ್ ಅವರ ಕಾರು ಅಪಘಾತಕ್ಕೊಳಗಾಗಿದ್ದು, ಗಾಯಗೊಂಡ ಆಂಡ್ರ್ಯೂ ಅವರನನು ಕೂಡಲೇ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಿಬಿಸಿಯ “ಟಾಪ್ ಗೇರ್” ಕಾರ್ಯಕ್ರಮದ ಸಂಚಿಕೆಯ ಚಿತ್ರೀಕರಣದ ವೇಳೆ ಆಂಡ್ರ್ಯೂ ಕುಳಿತಿದ್ದ ಕಾರು ಅಪಘಾತಕ್ಕೀಡಾಯಿತು. ಕೂಡಲೇ ಸೆಟ್ನಲ್ಲಿದ್ದ ವೈದ್ಯಕೀಯ ತಂಡವು ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ವಿಮಾನದ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಬಿಬಿಸಿ ತಿಳಿಸಿರುವುದಾಗಿ ವರದಿಯಾಗಿದೆ.
124 ಎಂಪಿಎಚ್ ವೇಗದಲ್ಲಿ ಅವರು ಕಾರನ್ನು ಚಾಲನೆ ಮಾಡುತ್ತಿದ್ದರು. ಇದರಿಂದ ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಇನ್ನು ಆಂಡ್ರ್ಯೂ ಫ್ಲಿಂಟಾಫ್ ಅವರ ಕಾರು ಇದು ಎರಡನೇ ಬಾರಿಗೆ ಅಪಘಾತವಾಗುತ್ತಿರುವುದು. 2019ರಲ್ಲಿ ಕೂಡಾ ಅಪಘಾತ ಸಂಭವಿಸಿತ್ತು.