ನವದೆಹಲಿ, ಜ 08 (DaijiworldNews/HR): ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ಗಾಯದಿಂದಾಗಿ ಈ ವರ್ಷದ ಬಾಕ್ಸಿಂಗ್ ಮಹಿಳಾ ವಿಶ್ವ ಚಾಂಪಿಯನ್ಶಿಪ್ನಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಮೇರಿ ಕೋಮ್ ಅವರು ಒಟ್ಟು ಎಂಟು ಪದಕಗಳನ್ನು ಗೆದ್ದಿದ್ದು, ಗಾಯದ ಸ್ವರೂಪವನ್ನು ನಿರ್ದಿಷ್ಟಪಡಿಸಿಲ್ಲ, ಆದರೆ ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ವರ್ಷ ಮೇ 1 ರಿಂದ 14 ರವರೆಗೆ ಉಜ್ಬೇಕಿಸ್ತಾನದ ತಾಷ್ಕೆಂಟ್ನಲ್ಲಿ ಐಬಿಎ ವಿಶ್ವ ಚಾಂಪಿಯನ್ಶಿಪ್ ನಡೆಯಲಿದದು, 'ಗಾಯದಿಂದಾಗಿ ಐಬಿಎ ಮಹಿಳಾ ವಿಶ್ವ ಚಾಂಪಿಯನ್ಶಿಪ್ 2023 ರಲ್ಲಿ ಭಾಗವಹಿಸಲು ನನಗೆ ಸಾಧ್ಯವಾಗುವುದಿಲ್ಲ. ನಾನು ಶೀಘ್ರದಲ್ಲೇ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದದಾರೆ.
ಸಾರ್ವಕಾಲಿಕ ಶ್ರೇಷ್ಠ ಭಾರತೀಯ ಕ್ರೀಡಾಪಟುಗಳಲ್ಲಿ ಒಬ್ಬರಾದ ಮೇರಿ ವಿಶ್ವ ಚಾಂಪಿಯನ್ ಶಿಪ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಬಾಕ್ಸರ್ ಆಗಿದ್ದಾರೆ. ಅವರು ಮೊದಲ ಏಳು ವಿಶ್ವ ಚಾಂಪಿಯನ್ ಶಿಪ್ ಗಳಲ್ಲಿ ಪ್ರತಿಯೊಂದರಲ್ಲೂ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಆಗಿದ್ದಾರೆ.