ಬೆಂಗಳೂರು,ಜ 13 ( DaijiworldNews/MS): ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ.2ನೇ ಏಕದಿನ ಪಂದ್ಯಕ್ಕೂ ಮುನ್ನ ಅವರ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದಿದೆ. ಹೀಗಾಗಿ ಮೂರನೇ ಏಕದಿನ ಪಂದ್ಯಕ್ಕಾಗಿ ತಿರುವನಂತಪುರಂಗೆ ಪ್ರಯಾಣಿಸಿಲ್ಲ.
ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ದ್ರಾವಿಡ್ ಅವರ ರಕ್ತದೊತ್ತಡದಲ್ಲಿ ಏರುಪೇರು ಕಂಡುಬಂದಿದ್ದು, ವೈದ್ಯರು ತಪಾಸಣೆ ನಡೆಸಿ ಔಷಧಿಯನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ದ್ರಾವಿಡ್ ಇದೀಗ ಹೆಚ್ಚಿನ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ತೆರಳಲಿದ್ದು, ಹೀಗಾಗಿ ಭಾನುವಾರ (ಜನವರಿ 15) ತಿರುವನಂತಪುರದಲ್ಲಿ ಮೂರನೇ ಏಕದಿನ ಪಂದ್ಯಕ್ಕಾಗಿ ತಂಡವನ್ನು ಸೇರಿಕೊಳ್ಳುವುದು ಅನುಮಾನವಾಗಿದೆ.