ನವದೆಹಲಿ, ಜ 25 (DaijiworldNews/DB): ಭಾರತದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಐಸಿಸಿ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನಕ್ಕೆ ತಲುಪಿದ್ದಾರೆ. ಸಿರಾಜ್ ಕ್ರಿಕೆಟ್ ವೃತ್ತಿ ಜೀವನದಲ್ಲಿ ಇದೊಂದು ಹೊಸ ಮೈಲಿಗಲ್ಲಾಗಿದೆ.
28 ವರ್ಷದ ಮೊಹಮ್ಮದ್ ಸಿರಾಜ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಇದರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ನ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ನ್ಯೂಜಿಲೆಂಡ್ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ಮತ್ತು ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ವುಡ್ ಅವರನ್ನು ಹಿಂದಿಕ್ಕಿ 729 ಅಂಕಗಳೊಂದಿಗೆ ನಂ.1 ಬೌಲರ್ ಏಕದಿನದಲ್ಲಿ ನಂಬರ್ 1 ಬೌಲರ್ ಆಗಿ ಸಿರಾಜ್ ಗುರುತಿಸಿಕೊಂಡಿದ್ದಾರೆ. ಹೇಜಲ್ವುಡ್ 727 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
2019 ರ ಜನವರಿ 15ರಂದು ಅಡಿಲೇಡ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್'ಗೆ ಪಾದಾರ್ಪಣೆ ಮಾಡಿದ್ದ ಸಿರಾಜ್, ಈವರೆಗೆ ಟೀಮ್ ಇಂಡಿಯಾ ಪರ ಒಟ್ಟು 21 ಏಕದಿನ ಪಂದ್ಯಗಳನ್ನು ಆಡಿದ್ದಾರೆ.