ನವದೆಹಲಿ, ಮಾ 15 (DaijiworldNews/SM): ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್ ವೇಗದ ಬೌಲರ್ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಈ ಸಾಧನೆಯನ್ನು ಮಾಡಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಒಟ್ಟು 25 ವಿಕೆಟ್ ಪಡೆದಿರುವ ಅಶ್ವಿನ್ 869 ರೇಟಿಂಗ್ ಪಾಯಿಂಟ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಆಂಡರ್ಸನ್ ಎರಡನೇ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಬ್ಯಾಟ್ಸ್ಮನ್ಗಳ ಟೆಸ್ಟ್ ಶ್ರೇಯಾಂಕದಲ್ಲಿ ಎಂಟು ಸ್ಥಾನಗಳ ಜಿಗಿತ ಕಂಡಿದ್ದಾರೆ. ಆ ಮೂಲಕ 13ನೇ ಸ್ಥಾನದಲ್ಲಿದ್ದಾರೆ.
ಟೆಸ್ಟ್ ಬ್ಯಾಟ್ಸ್ಮನ್ಗಳ ಶ್ರೇಯಾಂಕ ಟಾಪ್ 10ರ ಪಟ್ಟಿಯಲ್ಲಿ ರಿಷಬ್ ಪಂತ್ 9ನೇ ಮತ್ತು ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ. ಅಕ್ಷರ್ ಪಟೇಲ್ ಅವರು ಸ್ಮರಣೀಯ ಆಟವಾಡಿದ್ದು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎಂಟು ಸ್ಥಾನಗಳನ್ನು ಜಿಗಿದಿದ್ದಾರೆ 44ನೇ ಸ್ಥಾನಕ್ಕೆ ತಲುಪಿದ್ದಾರೆ. ಆಲ್ ರೌಂಡರ್ಗಳ ಪಟ್ಟಿಯಲ್ಲಿ ಒಟ್ಟಾರೆ ನಾಲ್ಕನೇ ಸ್ಥಾನದಲ್ಲಿದ್ದು ನಾಲ್ಕು ಪಂದ್ಯಗಳಲ್ಲಿ 264 ರನ್ ಪೇರಿಸಿದ್ದಾನೆ.