ಚೆನ್ನೈ, ಮಾ 22 (DaijiworldNews/SM): ಭಾರತದ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 21 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ 270 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ 49.1 ಓವರ್ ನಲ್ಲಿ 248 ರನ್ ಗಳಿಗೆ ಆಲೌಟ್ ಆಗುವ ಮೂಲಕ 21 ರನ್ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಸೋತಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 49 ಓವರ್ಗಳಲ್ಲಿ 269 ರನ್ಗಳಿಗೆ ತನ್ನೆಲ್ಲ ವಿಕೆಟ್ಗಳನ್ನು ಕಳೆದುಕೊಂಡಿತು. ಬಳಿಕ ಗುರಿ ಬೆನ್ನಟ್ಟಿದ ಭಾರತ, ವಿರಾಟ್ ಕೊಹ್ಲಿ (54) ಅರ್ಧಶತಕದ ಹೊರತಾಗಿಯೂ 49.1 ಓವರ್ಗಳಲ್ಲಿ 248 ರನ್ಗಳಿಗೆ ಆಲೌಟ್ ಆಯಿತು. 72 ಎಸೆತಗಳನ್ನು ಎದುರಿಸಿದ ಕೊಹ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 54 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ ಆಲ್ರೌಂಡ್ ಪ್ರದರ್ಶನ ನೀಡಿದರೂ (40 ರನ್ ಹಾಗೂ 3 ವಿಕೆಟ್) ಯಾವುದೇ ಪ್ರಯೋಜನ ಆಗಲಿಲ್ಲ. ಶುಭಮನ್ ಗಿಲ್ 37, ಕೆ.ಎಲ್. ರಾಹುಲ್ 32, ನಾಯಕ ರೋಹಿತ್ ಶರ್ಮಾ 30 ರನ್ ಗಳಿಸಿದರು. ಸೂರ್ಯಕುಮಾರ್ ಕುಮಾರ್ ಸತತ ಮೂರನೇ ಸಲವೂ ಗೋಲ್ಡನ್ ಡಕ್ ಔಟ್ ಆದರು.