ಮೊಹಾಲಿ, ಏ 20 (DaijiworldNews/HR): ಮೊಹಾಲಿಯಲ್ಲಿ ನಡೆಯುತ್ತಿರುವ ಐಪಿಎಲ್ ನ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿ ಬಿ) ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದು, ಆರ್ಸಿಬಿ ವಿರುದ್ಧ ಟಾಸ್ ಗೆದ್ದರುವ ಪಂಜಾಬ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ಸೋಮವಾರ ನಡೆದಿದ್ದ ಪಂದ್ಯದಲ್ಲಿ ಫಫ್ ಡುಪ್ಲೆಸಿ ಬಳಗ ಎಂಟು ರನ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಸೋತಿತ್ತು.
ಇನ್ನು ಐದು ಪಂದ್ಯಗಳನ್ನು ಆಡಿರುವ ಆರ್ಸಿಬಿ ನಾಲ್ಕು ಪಾಯಿಂಟ್ಸ್ಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಮೇಲಕ್ಕೇರಬೇಕಾದರೆ 2–3 ಪಂದ್ಯಗಳಲ್ಲಿ ಸತತ ಗೆಲುವು ಅನಿವಾರ್ಯ ಎನಿಸಿದೆ.
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದೊಂದಿಗೆ ಗೆಲ್ಲುವ ಹುಮ್ಮಸನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತೋರಿಸುತ್ತಿದೆ.