ದೋಹಾ, ಮೇ 06 (DaijiworldNews/MS): ಡೈಮಂಡ್ ಲೀಗ್ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಚಿನ್ನದ ಪದಕ ಗೆದ್ದಿದ್ದಾರೆ. ಮೂಲಕ ಮುಂದಿನ ವರ್ಷ ನಡೆಯಲಿರುವ ಒಲಿಂಪಿಕ್ಸ್ಗೆ ಟಿಕೆಟ್ ಪಡೆದುಕೊಂಡಿದ್ದಾರೆ. ನೀರಜ್ರ ಅದ್ಭುತ ಪ್ರದರ್ಶನಕ್ಕಾಗಿ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ವರ್ಷದ ಮೊದಲ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ. ದೋಹಾ ಡೈಮಂಡ್ ಲೀಗ್ನಲ್ಲಿ 88.67 ಮೀ. ಜಾವೆಲಿನ್ ದೂರ ಎಸೆದು ನಂಬರ್ ಒನ್ ಆಗುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿದರು.
ನೀರಜ್ರ ಅವರಿಗೆ ಭವಿಷ್ಯದಲ್ಲಿ ನಿಮಗೆ ಹೆಚ್ಚಿನ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.