ಚೆನ್ನೈ,ಮೇ23(DaijiworldNews/KH):ಐಪಿಎಲ್ನಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಗುಜರಾತ್ ಟೈಟಾನ್ಸ್ ತಂಡ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಖಾಮಖಿಯಾಗಲಿದೆ. ೨ ತಂಡಗಳು ಫೈನಲ್ಗೆ ತಲುಪಲೇಬೇಕೆಂಬ ಕನಸನ್ನು ಹೊತ್ತಿದೆ. ಇನ್ನೂ ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಕಾಲಿಟ್ಟಾರೆ ಸೋತ ತಂಡ ಎಲಿಮಿನೇಟರ್ನಲ್ಲಿ ಗೆದ್ದ ಟೀಮ್ನೊಂದಿಗೆ ಸೆಣೆಸಾಡಲಿದೆ.
ಗುಜರಾತ್ ಹಾಗೂ ಚೆನ್ನೈ ಸೀಸನ್-16ನಲ್ಲಿ ಸಾಲಿಡ್ ಪರ್ಫಾಮೆನ್ಸ್ ನೀಡಿ ತಮ್ಮದೇ ಆದ ಸ್ಪೆಷಾಲಿಟಿ ಹೊಂದಿದೆ. ಎದುರಾಳಿಗಳನ್ನ ಮಣಿಸೋಕೆ ವಿಶೇಷ ಅಸ್ತ್ರಗಳನ್ನೇ ಹೊಂದಿರೋ ಈ ಟೀಮ್ಸ್, ರಣರಂಗದಲ್ಲಿ ಜಿದ್ದಾಜಿದ್ದಿನ ಕಾಳಗ ನಡೆಸೋದಂತೂ ಗ್ಯಾರಂಟಿ. ಇದಕ್ಕೆ ಕಾರಣ ಮದಗಜಗಳ ಬಲ.
ಗುಜರಾತ್, ಚೆನ್ನೈ, ಲಖನೌ ಮತ್ತು ಮುಂಬೈ ಪ್ಲೇ ಆಫ್ಗೆ ಕ್ವಾಲಿಫೈ ಆದ ತಂಡಗಳಾಗಿವೆ. ಇಂದು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ ಎಂಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವು ಚೆನೈನ ಚಿದಂಬರಂ ಸ್ಟೇಡಿಯಂನಲ್ಲಿ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ಗೆ ಆಯ್ಕೆಯಾಗಲಿದೆ.
ಇನ್ನೂ ಈ ತಂಡದಲ್ಲಿ, ಗುಜರಾತ್ ತಂಡ ಇಡೀ ಟೂರ್ನಿಯಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಾ ಬಂದಿದ್ದು, ಆಡಿದ 14 ಪಂದ್ಯಗಳ ಪೈಕಿ ಸೋತಿರುವುದು ಕೇವಲ ನಾಲ್ಕು ಪಂದ್ಯ ಮಾತ್ರ. ಹಾರ್ದಿಕ್ ಪಡೆ ಹಿಂದಿನ ಪಂದ್ಯದಲ್ಲಿ ಆರ್ಸಿಬಿಯನ್ನು ಸೋಲಿಸಿ ಟೂರ್ನಿಯಿಂದ ಹೊರದಬ್ಬಿತ್ತು. ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದೆ. ವೃದ್ದಿಮಾನ್ ಸಾಹ ಹಾಗೂ ಶುಭ್ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಗಿಲ್ ಅಂತೂ ಬೊಂಬಾಟ್ ಫಾರ್ಮ್ನಲ್ಲಿದ್ದು ಹಿಂದಿನ ಮ್ಯಾಚ್ನಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ನಾಯಕ ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಪಾಂಡ್ಯ ಜೊತೆ ರಶೀದ್ ಖಾನ್ ಆಲ್ರೌಂಡರ್ ಆಗಿ ಕಾಣಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡ ಬ್ಯಾಟಿಂಗ್- ಬೌಲಿಂಗ್ ಎರಡೂ ವಿಭಾಗಗಳಲ್ಲಿ ಬಲಿಷ್ಠವಾಗಿದ್ದು, ರುತುರಾಯ್ ಗಾಯಕ್ವಾಡ್, ಡೆವೋನ್ ಕಾನ್ವೆ ಭರ್ಜರಿ ಫಾರ್ಮ್ನಲ್ಲಿದ್ದು ಅತ್ಯುತ್ತಮ ಆರಂಭ ಒದಗಿಸುತ್ತಿದ್ದಾರೆ. ಅಜಿಂಕ್ಯಾ ರಹಾನೆ ಕೂಡ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಶಿವಂ ದುಬೆ ಪ್ರತಿ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ಗಮನ ಸೆಳೆದಿದ್ದಾರೆ. ಅಂಬಟಿ ರಾಯುಡು ಹಾಗೂ ಮೊಯೀನ್ ಅಲಿ ಕಡೆಯಿಂದ ನಿರೀಕ್ಷೆಗೆ ತಕ್ಕ ಆಟ ಬರುತ್ತಿಲ್ಲ. ಧೋನಿ ಹಾಗೂ ಜಡೇಜಾ ಫಿನಿಶಿಂಗ್ ಜವಾಬ್ದಾರಿ ಹೊತ್ತಿದ್ದಾರೆ. ಬೌಲಿಂಗ್ನಲ್ಲಿ ಸಿಎಸ್ಕೆ ಪರ ತುಶಾರ್ ದೇಶ್ಪಾಂಡೆ, ಮಹೀಶಾ ತೀಕ್ಷಣ, ಮತೀಶಾ ಪತಿರಾನ, ಆಕಾಶ್ ಸಿಂಗ್ ಇದ್ದು ಜಡೇಜಾ, ಅಲಿ ಸಾಥ್ ನೀಡುತ್ತಿದ್ದಾರೆ