ಅಹಮದಾಬಾದ್, ಮೇ 29 (DaijiworldNews/KH): ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ಮಳೆಯಿಂದ ರದ್ದಾಗಿದೆ. ಇಂದು ಮಳೆಯ ಆರ್ಭಟ ಮುಂದುವರಿದರೆ ಲೀಗ್ ರ್ಯಾಂಕಿಂಗ್ ಪಟ್ಟಿಯ ಆಧಾರದ ಮೇಲೆ ಚಾಂಪಿಯನ್ಸ್ ಪಟ್ಟ ನಿರ್ಧರಿಸಲಾಗುತ್ತದೆ.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಭಾರೀ ಮಳೆಯಿಂದ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಹೀಗಾಗಿ ಅಂದು ನಡೆಯಬೇಕಿದ್ದ ಪಂದ್ಯವನ್ನು ಇಂದಿಗೆ ಮುಂದೂಡಲಾಗಿದೆ. ಈ ಪಂದ್ಯದ ಕದನವನ್ನು ವೀಕ್ಷಿಸಲು 1,32,000 ಹೆಚ್ಚು ಪ್ರೇಕ್ಷಕರು ನಿರಾಸೆ ಉಂಟಾಯಿತು. ವಿಶೇಷ ಎಂದರೆ 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ಪಂದ್ಯ ಮೀಸಲು ದಿನದಂದು ನಡೆಯುತ್ತಿರುವುದು ಇದೇ ಪ್ರಥಮ ಬಾರಿ.
ಭಾನುವಾರದಂದು ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು ಆದರೆ ಮಳೆಯಿಂದಾಗಿ ರದ್ದುಗೊಳ್ಳಿಸಲಾಯಿತ್ತು. ಮೈದಾನ ಸಿಬ್ಬಂದಿಗಳು ಪಿಚ್ಗಳಿಗೆ ಹೊದಿಕೆ ಹಾಕಿದರು. 7 ಗಂಟೆ ಹೊತ್ತಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯ ಆರ್ಭಟ ಹೆಚ್ಚಿದ್ದರಿಂದ ಕ್ರೀಡಾಂಗಣದಲ್ಲಿ ನೀರು ಹರಿಯಿತು. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಅಭಿಮಾನಿಗಳು ಮಳೆಯಿಂದ ರಕ್ಷಿಸಿಕೊಳ್ಳಲು ಕಷ್ಟ ಪಡುತ್ತಿರುವುದು ಕಂಡುಬಂತು. ರಾತ್ರಿ 8.30 ಹೊತ್ತಿಗೆ ಮಳೆ ನಿಂತಿತು. ಅಂಪೈರ್ಗಳು ಮೈದಾನ ಪರಿಶೀಲಿಸಿ ಟಾಸ್ ಮಾಡುವ ನಿರ್ಧಾರ ತೆಗೆದುಕೊಂಡರು. ಇನ್ನೇನು ಟಾಸ್ ನಡೆಯುತ್ತೆ ಎಂಬೊತ್ತಿಗೆ ಪುನಃ ಮಳೆ ಸುರಿಯಲಾರಂಭಿಸಿತು.
ಭಾನುವಾರ ರಾತ್ರಿ ಸುಮಾರು 10.30ರವರೆಗೂ ಜೋರಾಗಿ ಮಳೆ ಮುಂದುವರಿಯಿತು ಹೀಗಾಗಿ ಪಿಚ್ಗೆ ಹಾಕಿದ್ದ ಹೊದಿಕೆ ಮತ್ತು ಔಟ್ಫೀಲ್ಡ್ನಲ್ಲಿ ಸಾಕಷ್ಟು ನೀರು ನಿಂತಿತು. ಅಂತಿಮವಾಗಿ ರಾತ್ರಿ 10.55ರ ವೇಳೆಗೆ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಮತ್ತು ಅಂಪೈರ್ಗಳು ಮಾತುಕತೆ ನಡೆಸಿ ಪಂದ್ಯವನ್ನು ಇಂದು ಸೋಮವಾರಕ್ಕೆ ಮುಂದೂಡಲು ನಿರ್ಧಾರ ಮಾಡಿದ್ದಾರೆ.
ಜೋರಾಗಿ ಮಳೆ ಸುರಿದು 5 ಓವರ್ಗಳ ಪಂದ್ಯ ಅಥವಾ ಸೂಪರ್ ಓವರ್ನ ಪಂದ್ಯ ಕೂಡ ನಡೆಸಲು ಸಾಧ್ಯವಾಗಲಿಲ್ಲ ಎಂದಾದರೆ ಲೀಗ್ ಹಂತದ ನಂತರ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡ ವಿಜಯಶಾಲಿಯಾಗಲಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ಗೆ ಲಾಭವಾಗಲಿದೆ. ಐಪಿಎಲ್ 2023 ಚಾಂಪಿಯನ್ ಪಟ್ಟ ಅಲಂಕರಿಸಲಿದೆ.