ಮುಂಬೈ ,ಜು 18 (DaijiworldNews/AK):ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ.
ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅದು ಕೂಡ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಘೋಷಿಸಿದ್ದಾರೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ಬುಮ್ರಾ ಹಂಚಿಕೊಳ್ಳುವ ಮೂಲಕ ಶೀಘ್ರದಲ್ಲೇ ತಂಡಕ್ಕೆ ಪುನರಾಗಮನ ಮಾಡುವುದಾಗಿ ಹೇಳಿದ್ದಾರೆ.
ಜಸ್ಪ್ರೀತ್ ಬುಮ್ರಾ ಸೆಪ್ಟೆಂಬರ್ 19, 2022 ರಂದು ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಕೊನೆಯ ಬಾರಿ ಕಣಕ್ಕಿಳಿದಿದ್ದಾರೆ. ಅವರು ಬೆನ್ನು ನೋವಿಗೆ ತುತ್ತಾಗಿದ್ದರು. ಇದಾದ ಬಳಿಕ ಬುಮ್ರಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ. ಇದರಿಂದಾಗಿ ಪ್ರಮುಖ ಟೂರ್ನಿಗಳಾದ ಏಷ್ಯಾಕಪ್, ಟಿ20 ವಿಶ್ವಕಪ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾಸ್ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
ಇದೀಗ ಟೀಮ್ ಇಂಡಿಯಾ ಮತ್ತೊಂದು ಏಷ್ಯಾಕಪ್ ಹೊಸ್ತಿಲಲ್ಲಿದೆ. ಆಗಸ್ಟ್ 31 ರಿಂದ ಏಷ್ಯಾಕಪ್ 2023 ಶುರುವಾಗಲಿದೆ. ಅದಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ ಆಗಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಏಕೆಂದರೆ ಏಷ್ಯಾಕಪ್ ಬೆನ್ನಲ್ಲೇ ಏಕದಿನ ವಿಶ್ವಕಪ್ ಕೂಡ ಶುರುವಾಗಲಿದೆ. ಅದಕ್ಕೂ ಮುನ್ನ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ. ಇತ್ತ ಜಸ್ಪ್ರೀತ್ ಬುಮ್ರಾ ಕಂಬ್ಯಾಕ್ ಅನ್ನುವುದರಿಂದ ಅಭಿಮಾನಿಗಳು ಕೂಡ ಎದುರು ನೋಡುತ್ತಿದ್ದಾರೆ.