ಮೊಹಲಿ, ಸೆ 23 (DaijiworldNews/AK): ಟೆಸ್ಟ್, ಏಕದಿನ, ಟಿ20, ಐಸಿಸಿಯ ಮೂರು ಸ್ವರೂಪ ಕ್ರಿಕೆಟ್ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಸಾಧನೆ ಮಾಡಿದ ವಿಶ್ವದ 2ನೇ ತಂಡ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.
ಟೆಸ್ಟ್ ಹಾಗೂ ಟಿ20 ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದ ಟೀಮ್ ಇಂಡಿಯಾ ಏಕದಿನ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡವು ಏಕದಿನ ತಂಡಗಳ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಇದರೊಂದಿಗೆ ಮೂರು ಸ್ವರೂಪಗಳಲ್ಲೂ ಅಗ್ರ ಶ್ರೇಯಾಂಕ ಪಡೆದ 2ನೇ ತಂಡ ಎಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.
ಇದಕ್ಕೂ ಮುನ್ನ ಇಂತಹದೊಂದು ದಾಖಲೆಯನ್ನು ಸೌತ್ ಆಫ್ರಿಕಾ ನಿರ್ಮಿಸಿತ್ತು. 2012 ರಲ್ಲಿ ಗ್ರೇಮ್ ಸ್ಮಿತ್ ನಾಯಕತ್ವದ ಸೌತ್ ಆಫ್ರಿಕಾ ತಂಡವು ಟೆಸ್ಟ್, ಟಿ20 ಹಾಗೂ ಏಕದಿನ ಕ್ರಿಕೆಟ್ನಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಮೊದಲ ಟೀಮ್ ಎನಿಸಿಕೊಂಡಿತು. ಇದೀಗ ಮೂರು ಸ್ವರೂಪಗಳಲ್ಲೂ ನಂಬರ್ 1 ತಂಡವಾಗಿ ಹೊರಹೊಮ್ಮುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿರುವುದು ದಾಖಲೆಯಾಗಿದೆ.