ಚೆನ್ನೈ, ಅ 08 (DaijiworldNews/HR): ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಏಕದಿನ ವಿಶ್ವಕಪ್ ನಡೆದಿದ್ದು ಮೊದಲ ಪಂದ್ಯದಲ್ಲಿ ಆಸೀಸ್ ತಂಡದ ಬ್ಯಾಟರ್ ಡೇವಿಡ್ ವಾರ್ನರ್ 41 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
ಡೇವಿಡ್ ವಾರ್ನರ್ ಅವರು ಟೀಂ ಇಂಡಿಯಾ ವಿರುದ್ಧ 52 ಎಸೆತಗಳಲ್ಲಿ 6 ಬೌಂಡರಿ ಸಹಿತ 41 ರನ್ ಬಾರಿಸಿದ್ದು, ಏಕದಿನ ವಿಶ್ವಕಪ್ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್ನಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ನಿರ್ಮಿಸಿದ್ದಾರೆ.
ಇನ್ನು ಡೇವಿಡ್ ವಾರ್ನರ್ ಇದುವರೆಗೆ ಏಕದಿನ ವಿಶ್ವಕಪ್ನಲ್ಲಿ 19 ಇನ್ನಿಂಗ್ಸ್ಗಳನ್ನು ಆಡಿದ್ದು, 1000 ರನ್ ಪೂರೈಸಿದ್ದಾರೆ.