ಇಸ್ಲಾಮಾಬಾದ್: ನ 15 (DaijiworldNews/MR): ಬಾಲಿವುಡ್ ನಟಿ ಐಶ್ವರ್ಯಾ ರೈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಅಬ್ದುಲ್ ರಜಾಕ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಇತ್ತೀಚಿಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಪಾಕಿಸ್ತಾನ ತಂಡವನ್ನು ಟೀಕಿಸುವ ಬರದಲ್ಲಿ ನಟಿ ಐಶ್ವರ್ಯಾ ರೈ ಹೆಸರು ಬಳಿಸಿ ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಇದು ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು.
ಇದೀಗ ಅಬ್ಬುಲ್ ರಜಾಕ್ ಐಸಿಸಿ ವಿಶ್ವಕಪ್ 2023 ರಿಂದ ಪಾಕ್ ತಂಡವು ಬೇಗನೆ ನಿರ್ಗಮಿಸಿದ ಕುರಿತು ಮಾತನಾಡುತ್ತಿದ್ದರು. ಈ ವೇಳೆ ಪಿಸಿಬಿಯ ಆಡಳಿತ ಮಂಡಳಿಯನ್ನು ಟೀಕಿಸುವಾಗ, ಅಬ್ದುಲ್ ಐಶ್ವರ್ಯಾ ರೈ ಅವರನ್ನು ಉದಾಹರಣೆಯಾಗಿ ಬಳಸಿಕೊಂಡರು. ’ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಉತ್ತಮ ನಡತೆ, ಸದ್ಗುಣಶೀಲ ಮಕ್ಕಳು ಹುಟ್ಟುತ್ತವೆ ಎಂಬ ನಿರೀಕ್ಷೆ ಸುಳ್ಳು ಎಂಬ ಅಧಿಕಪ್ರಸಂಗದ ಮಾತನ್ನು ಹೇಳಿದ್ದರು.
ಅಬ್ದುಲ್ ರಜಾಕ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ನಟಿ ಅಭಿಮಾನಿಗಳು ಸೇರಿದಂತೆ ಭಾರತೀಯರಿಂದ ಭಾರಿ ವಿರೋಧ ವ್ಯಕ್ತವಾಯಿತು. ಇದೀಗ ಅಬ್ದುಲ್ ರಜಾಕ್ ಕ್ಷಮೆಯಾಚಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಸುದ್ದಿಗೋಷ್ಠಿ ವೇಳೆ ಪಾಕಿಸ್ತಾನ ಕ್ರಿಕೆಟ್ ತರಬೇತಿ ಹಾಗೂ ಉದ್ದೇಶದ ಕುರಿತು ಮಾತನಾಡುತ್ತಿದ್ದೆ. ಆಗ ನಾನು ಬಾಯಿತಪ್ಪಿನಿಂದಾಗಿ ಐಶ್ವರ್ಯಾ ರೈ ಅವರ ಹೆಸರು ಪ್ರಸ್ತಾಪಿಸಿದೆ. ನಾನು ವೈಯಕ್ತಿಕವಾಗಿ ಅವರಲ್ಲಿ ಕ್ಷಮೆ ಕೇಳುತ್ತೇನೆ. ಅಚಾತುರ್ಯದಿಂದ ನಟಿಯ ಹೆಸರು ಬಂದಿದೆ ಎಂದು ವಿಡಿಯೋಂದನ್ನ ಅಬ್ದುಲ್ ರಜಾಕ್ ಪೋಸ್ಟ್ ಮಾಡಿದ್ದಾರೆ.