ಬ್ರಿಟನ್, ಫೆ 27(DaijiworldNews/AA): ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮ್ಮದ್ ಶಮಿ ಅವರು ಸೋಮವಾರ ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 2024 ರ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಸ್ಪತ್ರೆಯ ಬೆಡ್ನಲ್ಲಿರುವ ಫೋಟೊಗಳನ್ನು ಹಂಚಿಕೊಂಡಿರುವ ಶಮಿ ಅವರು, ’ನನ್ನ ಅಕಿಲ್ಸ್ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ’ ಎಂದು ಪೋಸ್ಟ್ ಮಾಡಿದ್ದಾರೆ.
2023 ರ ಐಸಿಸಿ ಕ್ರಿಕೆಟ್ ವಿಶ್ವಕಪ್ನಲ್ಲಿ ಶಮಿ ಅವರು ಮಿಂಚಿದ್ದರು. ಈ ವಿಶ್ವಕಪ್ ಪಂದ್ಯಾವಳಿ ವೇಳೆಯೇ ಶಮಿ ಅವರು ಎಡ ಪಾದದ ಗಾಯದಿಂದ ಬಳಲುತ್ತಿದ್ದರು. ಗಾಯಕ್ಕಾಗಿ ಚುಚ್ಚುಮದ್ದು ತೆಗೆದುಕೊಂಡು ಆಟವನ್ನು ಅವರು ಮುಂದುವರೆಸಿದ್ದರು. ಆದರೆ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶಮಿ ಅವರು ಈ ಬಾರಿಯ ಐಪಿಎಲ್ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.