ಮುಂಬೈ,ಮಾ 05(DaijiworlNews/AK): ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ತೊಡೆಸಂಧು ನೋವಿನ ಸಮಸ್ಯೆ ಬಳಲುತ್ತಿದ್ದ ಕಾರಣ ರಾಹುಲ್ ಉಳಿದ ಪಂದ್ಯಗಳಲ್ಲಿ ಹೊರಗುಳಿದ್ದಿರು. ಇದೀಗ ಕೊನೆಯ ಟೆಸ್ಟ್ ಪಂದ್ಯದಿಂದಲೂ ಹಿಂದೆ ಸರಿದಿದ್ದಾರೆ.
ಕೆಎಲ್ ರಾಹುಲ್, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯಬೇಕಿದ್ದರೆ ಫಿಟ್ನೆಸ್ ಟೆಸ್ಟ್ಗೆ ಒಳಗಾಗಬೇಕಾದ ಅನಿವಾರ್ಯ ಇದೆ. ಬಿಸಿಸಿಐ ನಿಯಮದ ಪ್ರಕಾರ ಟೀಮ್ ಇಂಡಿಯಾ ಆಟಗಾರರು ಗಾಯಗೊಂಡ ಬಳಿಕ ಐಪಿಎಲ್ನಲ್ಲಿ ಕಾಣಿಸಿಕೊಳ್ಳಬೇಕಿದ್ದರೆ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಿಂದ ಫಿಟ್ನೆಸ್ ಟೆಸ್ಟ್ ಸರ್ಟಿಫಿಕೇಟ್ ಪಡೆಯಬೇಕು.ಅದರಂತೆ ಇದೀಗ ಕೆಎಲ್ ರಾಹುಲ್ ಐಪಿಎಲ್ಗೂ ಮುನ್ನ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯದ ವೇಳೆ ಕೆಎಲ್ ರಾಹುಲ್ ಶೇ.90 ರಷ್ಟು ಫಿಟ್ ಆಗಿದ್ದಾರೆ ಎನ್ನಲಾಗಿತ್ತು. ಇದಾಗ್ಯೂ ನೋವಿನ ಸಮಸ್ಯೆಯು ತಲೆದೂರಿದ್ದರಿಂದ ಅವರು ಲಂಡನ್ನಲ್ಲಿ ಉನ್ನತ ವೈದ್ಯಕೀಯ ತಜ್ಞರನ್ನು ಭೇಟಿಯಾಗಿ ಚಿಕಿತ್ಸೆ ಮುಗಿಸಿ ಭಾನುವಾರ ಭಾರತಕ್ಕೆ ಮರಳಿದ್ದಾರೆ.ಎನ್ಸಿಎ ನಲ್ಲಿ ಕೆಎಲ್ ರಾಹುಲ್ ಫಿಟ್ನೆಸ್ಗೆ ಒಳಗಾಗಲಿದ್ದು, ಇದರಲ್ಲಿ ಪಾಸ್ ಆದರೆ ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿಯಲಿದ್ದಾರೆ.