ಮುಂಬೈ, 08 (DaijiworldNews/ AK): ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ. ಅದರಂತೆ ಧರ್ಮಶಾಲಾದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾದ ಬ್ಯಾಟ್ಸ್ಮನ್ಗಳು ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
ಉಭಯ ತಂಡಗಳ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ಟಾಪ್ ಐವರು ಬ್ಯಾಟರ್ಸ್ಗಳು 50ಕ್ಕೂ ಹೆಚ್ಚು ರನ್ಗಳ ಇನ್ನಿಂಗ್ಸ್ ಆಡಿದ್ದಾರೆ. ಇವರಲ್ಲಿ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಸಿಡಿಸಿದ್ದರೆ, ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್ ಮತ್ತು ದೇವದತ್ ಪಡಿಕ್ಕಲ್ ಅರ್ಧಶತಕ ಬಾರಿಸಿದ್ದಾರೆ. ವಿಶೇಷವೆಂದರೆ ಟೆಸ್ಟ್ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಭಾರತ ಈ ಸಾಧನೆ ಮಾಡಿದೆ.
ಸುಮಾರು 15 ವರ್ಷಗಳ ನಂತರ ಇದೀಗ ಮತ್ತೆ ಈ ಸಾಧನೆ ಮಾಡಿದ್ದಾರೆ. ಈ ಬಾರಿ ಯಶಸ್ವಿ ಜೈಸ್ವಾಲ್ 57 ರನ್, ರೋಹಿತ್ ಶರ್ಮಾ 103, ಶುಭಮನ್ ಗಿಲ್ 110, ದೇವದತ್ ಪಡಿಕ್ಕಲ್ 65 ಮತ್ತು ಸರ್ಫರಾಜ್ ಖಾನ್ 56 ರನ್ಗಳ ಅದ್ಭುತ ಇನ್ನಿಂಗ್ಸ್ಗಳನ್ನು ಆಡಿದ್ದಾರೆ. ಇದೇ ಮೊದಲ ಬಾರಿಗೆ ಇಂಗ್ಲೆಂಡ್ ವಿರುದ್ಧ ಭಾರತ ಈ ಸಾಧನೆ ಮಾಡಿದೆ.