ಮುಂಬೈ, ಮಾ 11 (DajiworldNews/AK): ಐಪಿಎಲ್ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಮಾರ್ಚ್ 22 ರಿಂದ ಆರಂಭವಾಗುವ ಈ ಮಿಲಿಯನ್ ಡಾಲರ್ ಟೂರ್ನಿ ಮೇ ಅಂತ್ಯಕ್ಕೆ ಕೊನೆಗೊಳ್ಳಲಿದೆ. ಆ ನಂತರ ಟಿ20 ವಿಶ್ವಕಪ್ ಆರಂಭವಾಗಲಿದೆ.
ಆದರೆ ಕ್ರಿಕೆಟ್ ಪ್ರೇಮಿಗಳಿಗೆ ಒಂದು ಅಘಾತಕಾರಿ ಸುದ್ದಿ ಅಂದ್ರೆ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ಆಡುವುದು ಅನುಮಾನವಾಗಿದೆ.
2023 ರ ಏಕದಿನ ವಿಶ್ವಕಪ್ ಬಳಿಕ ಗಾಯದಿಂದ ಟೀಂ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಸದ್ಯ ಪಾದದ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಶಮಿ ಐಪಿಎಲ್ನಿಂದ ಹೊರಗುಳಿಯಲಿದ್ದಾರೆ ಎಂದು ಕೇಳಿ ಬಂದಿತ್ತು. ಆದರೆ ಅವರು ಟಿ20 ವಿಶ್ವಕಪ್ನಿಂದಲೂ ಹೊರಬೀಳಲಿದ್ದಾರೆ ಎನ್ನಲಾಗುತ್ತಿದೆ.
ಶಮಿ ವಾಪಾಸು ಬರುವ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಈ ವರ್ಷದ ಸೆಪ್ಟೆಂಬರ್ನಲ್ಲಿ ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿ ಮೂಲಕ ಶಮಿ ತಂಡಕ್ಕೆ ಪುನರಾಗಮನ ಮಾಡಬಹುದು ಎಂದಿದ್ದಾರೆ.
ಆದರೆ ಶಮಿ ಜೂನ್ನಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ಗೆ ಲಭ್ಯವಾಗುವ ಸಾಧ್ಯತೆ ಇಲ್ಲ ಎನ್ನುವುದು ಖಚಿತವಾಗಿದೆ. ಬಾಂಗ್ಲಾದೇಶ ವಿರುದ್ಧದ ತವರಿನ ಸರಣಿಯೊಂದಿಗೆ ಶಮಿ ತಂಡಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದಿದ್ದಾರೆ.