ಚೆನ್ನೈ, ಮಾ 22(DaijiworldNews/AK): 17ನೇ ಆವೃತ್ತಿಯ ಐಪಿಎಲ್ (IPL) ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಚೆನ್ನೈನ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 6:30ಕ್ಕೆ ಅದ್ಧೂರಿ ಸಮಾರಂಭದೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ. ಈ ಇಂದಿನಿಂದ ಎರಡು ತಿಂಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ ನೀಡಲಿದೆ.
ಉದ್ಘಾಟನಾ ಪಂದ್ಯದಲ್ಲೇ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳ ನಡುವೆ ಪಂದ್ಯ ನಡೆಯಲಿದೆ. ಸದ್ಯ ಏ.7ರವರೆಗಿನ ವೇಳಾ ಪಟ್ಟಿ ಮಾತ್ರ ಪ್ರಕಟವಾಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೋಲ್ಕತ ನೈಟ್ರೈಡರ್ಸ್, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್, ಸನ್ರೈಸರ್ಸ್ಹೈದ್ರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಗುಜರಾತ್ ಟೈಟಾನ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣೆಸಲಿವೆ.
ಮುಂಬೈ ಇಂಡಿಯನ್ಸ್ ಈ ಬಾರಿ ಹಾರ್ದಿಕ್ ಪಾಂಡ್ಯ ನೂತನ ನಾಯಕರಾಗಿದ್ದಾರೆ. ಸೂಪರ್ಸ್ಟಾರ್ ರೋಹಿತ್ ಶರ್ಮ ಮಾಮೂಲಿ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ. ಗುಜರಾತ್ ಟೈಟಾನ್ಸ್ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಲಿದ್ದಾರೆ. ಹೈದ್ರಾಬಾದ್ ಸಾರಥ್ಯ ಸಂಜು ಸ್ಯಾಮ್ಸನ್ ಹೆಗಲೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಮತ್ತೆ ಕಣಕ್ಕಿಳಿಯಲಿದ್ದಾರೆ. ಲಕ್ನೋ ಜೈಂಟ್ಸ್ ತಂಡವನ್ನು ಕೆ.ಎಲ್.ರಾಹುಲ್ ಮುನ್ನಡೆಸಲಿದ್ದಾರೆ
ಆರ್ಸಿಬಿ ಮತ್ತು ಸಿಎಸ್ಕೆ ತಂಡಗಳ ನಡುವಿನ ಪರಸ್ಪರ ಮುಖಾಮುಖಿಯಲ್ಲಿ ಅಧಿಕ ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಲ್ಲಿದೆ. ವಿರಾಟ್ ಕೊಹ್ಲಿ ಚೆನ್ನೈ ವಿರುದ್ಧ ಬರೋಬ್ಬರಿ 985 ರನ್ ಗಳಿಸಿದ್ದಾರೆ. ಅವರು ಇನ್ನು 15 ರನ್ ಗಳಿಸಿದರೆ, ತಂಡವೊಂದರ ವಿರುದ್ಧ 1,000 ರನ್ ಪೂರೈಸಿದ ಆರ್ಸಿಬಿಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.