ಬೆಂಗಳೂರು , ಏ 02(DaijiworldNews/AK):ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.2) ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಮೂವರು ಆಟಗಾರರಿದ್ದಾರೆ. ಅದರಲ್ಲೂ ಲಕ್ನೋ ತಂಡವನ್ನು ಮುನ್ನಡೆಸುತ್ತಿರುವ ನಾಯಕ ಕೆಎಲ್ ರಾಹುಲ್ ಕನ್ನಡಿಗ ಹೀಗಾಗಿ ಈ ಪಂದ್ಯ ಬಹಳಷ್ಟು ಕುತೂಹಲ ಮೂಡಿಸಿದೆ.
ಇತ್ತ ಬೆಂಗಳೂರನ್ನು ಪ್ರತಿನಿಧಿಸುವ ಆರ್ಸಿಬಿ ತಂಡದಲ್ಲಿರುವುದು ಕೇವಲ ಇಬ್ಬರು ಕನ್ನಡಿಗರು ಮಾತ್ರ. ಅದರಲ್ಲಿ ಒಬ್ಬರಿಗೆ ಇದುವರೆಗೆ ಒಂದೇ ಒಂದು ಅವಕಾಶ ಸಿಕ್ಕಿಲ್ಲ.ಇನ್ನು ಉಭಯ ತಂಡಗಳಲ್ಲಿರುವ ಕರ್ನಾಟಕದ ಆಟಗಾರರಾದ ಆರ್ಸಿಬಿ ತಂಡದ ಮಾಜಿ ಆಟಗಾರ ಕರ್ನಾಟಕದ ಎಡಗೈ ದಾಂಡಿಗ ದೇವದತ್ ಪಡಿಕ್ಕಲ್ ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದಾರೆ. ಅಲ್ಲದೆ ಇಂದು ಆರ್ಸಿಬಿ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕರ್ನಾಟಕದ ಆಲ್ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಕೂಡ ಇದ್ದಾರೆ. ಕಳೆದೆರೆಡು ಸೀಸನ್ಗಳಲ್ಲಿ ರಾಹುಲ್ ನಾಯಕತ್ವದಲ್ಲಿ ಆಡುತ್ತಿರುವ ಗೌತಮ್ ಇಂದು ತವರು ಮೈದಾನದಲ್ಲಿ ಕಣಕ್ಕಿಳಿಯಬಹುದು ಎಂಬ ನಿರೀಕ್ಷೆ ಹೆಚ್ಚಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇಂದು ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಕಣಕ್ಕಿಳಿಯುವುದು ಖಚಿತ. ಕಳೆದ ಪಂದ್ಯದಲ್ಲಿ ವೈಶಾಕ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇಂದು ಸಹ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲಿದ್ದಾರೆ.
ಒಂದು ವರ್ಷದಿಂದ ಆರ್ಸಿಬಿ ತಂಡದಲ್ಲಿದ್ದರೂ ಕರ್ನಾಟಕದ ಯುವ ಆಲ್ರೌಂಡರ್ ಮನೋಜ್ ಭಾಂಡಗೆಗೆ ಐಪಿಎಲ್ಗೆ ಪಾದಾರ್ಪಣೆ ಮಾಡುವ ಅವಕಾಶ ಸಿಕ್ಕಿಲ್ಲ. ಇದೀಗ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಯುವ ಆಟಗಾರನಿಗೆ ಚಾನ್ಸ್ ನೀಡಲಿದ್ದಾರಾ ಅನ್ನುವುದು ಇಂದಿನ ಪಂದ್ಯದಲ್ಲಿ ಕಾದು ನೋಡಬೇಕಿದೆ.