ಮುಂಬೈ, ಏ 11(DaijiworldNews/AK):ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೃನಾಲ್ ಪಾಂಡ್ಯ ಅವರ ಸಹೋದರ ವೈಭವ್ ಪಾಂಡ್ಯ ಅವರನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ. 4.3 ಕೋಟಿ ರೂ. ವಂಚಿಸಿರುವುದಾಗಿ ಹಾರ್ದಿಕ್ ಪಾಂಡ್ಯ ನೀಡಿದ ದೂರಿನ ಮೇರೆಗೆ ಅವರನ್ನ ಬಂಧಿಸಲಾಗಿದೆ.
ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ ಹಾಗೂ ವೈಭವ್ ಪಾಂಡ್ಯ ಮೂವರು ಸೇರಿ ನಡೆಸುತ್ತಿದ್ದ ಪಾಲುದಾರಿಕೆ ಸಂಸ್ಥೆಯಿಂದ ಪಾಂಡ್ಯ ಸಹೋದರಿಗೆ ವೈಭವ್ ನಷ್ಟ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಾರ್ದಿಕ್, ಕೃನಾಲ್ ಮತ್ತು ವೈಭವ್ 2021ರಲ್ಲಿ ವ್ಯವಹಾರವೊಂದನ್ನ ಆರಂಭಿಸಿದ್ದರು. ಪಾಲುದಾರಿಕೆ ಸಂಸ್ಥೆ ಒಪ್ಪಂದದ ಪ್ರಕಾರ, ಬಂದ ಲಾಭದಿಂದ ಪಾಂಡ್ಯ ಬ್ರದರ್ಸ್ಗೆ ತಲಾ 40%, ವೈಭವ್ಗೆ 20% ಹಂಚಿಕೊಳ್ಳ ಬೇಕಿತ್ತು. ಆದ್ರೆ ವೈಭವ್ ಪ್ರತ್ಯೇಕ ಕಂಪನಿಯೊಂದನ್ನ ಸ್ಥಾಪಿಸಿ, ಪಾಂಡ್ಯ ಬ್ರದರ್ಸ್ ಸ್ಥಾಪಿಸಿದ್ದ ಸಂಸ್ಥೆ ಹಣವನ್ನ ಅದಕ್ಕೆ ಬಳಸಿಕೊಳ್ಳುತ್ತಿದ್ದರು. ಈ ಕುರಿತು ಹಾರ್ದಿಕ್ ಪಾಂಡ್ಯ ಅವರು ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗಕ್ಕೆ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ವೈಭವ್ ಪಾಂಡ್ಯ ಅವರನ್ನ ಬಂಧಿಸಲಾಗಿದೆ.