ನವದೆಹಲಿ, ಮೇ.5(DaijiworldNews/AA): ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ(ನಾಡಾ)ಯು ಕುಸ್ತಿಪಟು ಭಜರಂಗ್ ಪುನಿಯಾ ಅವರನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದೆ.
ಮಾ. 10 ರಂದು ಸೋನೆಪತ್ನಲ್ಲಿ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾದ ಬಳಿಕ ಭಜರಂಗ್ ಪುನಿಯಾ ಮೂತ್ರದ ಮಾದರಿ ನೀಡಿರಲಿಲ್ಲ. ಹೀಗಾಗಿ ಭವಿಷ್ಯದ ಯಾವುದೇ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸದಂತೆ ಭಜರಂಗ್ ಪುನಿಯಾ ಅವರನ್ನು ಅಮಾನತುಗೊಳಿಸಿದೆ.
ಈ ಅಮಾನತು ನಿರ್ಧಾರ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುವ ಅವರ ಪ್ರಯತ್ನಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ.