ನವದೆಹಲಿ, ಮೇ 18 (DaijiworldNews/MS): ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಬಿಬಿಸಿಸಿಐ ಪಂದ್ಯದ ಶೇ.30ರಷ್ಟು ದಂಡದೊಂದಿಗೆ ಐಪಿಎಲ್ 2025ರ ಒಂದು ಪಂದ್ಯದ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದಾರೆ.
ಶುಕ್ರವಾರ ವಾಂಖೆಡೆಯಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 18 ರನ್ಗಳಿಂದ ಸೋಲನುಭವಿಸಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ಹಾರ್ದಿಕ್ ಪಾಂಡ್ಯ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿದೆ. ಮುಂಬೈ ಇಂಡಿಯನ್ಸ್ ತಂಡದ ಪಂದ್ಯಗಳು ಮುಗಿದಿದ್ದು, ಹೀಗಾಗಿ ಈ ನಿಷೇಧ ಮುಂದಿನ ಸೀಸನ್ನಲ್ಲಿ ಜಾರಿಯಾಗಲಿದೆ. ಅದರಂತೆ ಐಪಿಎಲ್ 2025ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವುದಾದರೆ ಮೊದಲ ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ.
ಈ ಲೀಗ್ನಲ್ಲಿ ಹಾರ್ದಿಕ್ ಪಾಂಡ್ಯ ಪಂದ್ಯವೊಂದಕ್ಕೆ ನಿಷೇಧಕ್ಕೊಳಗಾದ 2ನೇ ನಾಯಕರಾಗಿದ್ದಾರೆ. ಇದಕ್ಕೂ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಕೂಡ ನಿಧಾನಗತಿಯ ಓವರ್ನಿಂದಾಗಿ 1 ಪಂದ್ಯದಿಂದ ನಿಷೇಧಕ್ಕೆ ಒಳಗಾಗಿದ್ದರು.