ಪ್ಯಾರಿಸ್, ಆ.08(DaijiworldNews/AK): ಸ್ಪೇನ್ನನ್ನು 2-1 ಗೋಲುಗಳಿಂದ ಮಣಿಸಿದ ಭಾರತ ತಂಡವು ಕಂಚಿನ ಪದಕ ಗೆದ್ದಿದೆ. 2020 ರ ಟೋಕಿಯೋ ಒಲಿಂಪಿಕ್ಸ್ನಲ್ಲೂ ಭಾರತ ಪುರುಷರ ಹಾಕಿ ತಂಡ ಕಂಚು ಗೆದ್ದಿತ್ತು.
ಜರ್ಮನ್ ವಿರುದ್ಧ ಸೆಮಿಫೈನಲ್ ತಲುಪಲು ವಿಫಲವಾಗಿ ಭಾರತ ತಂಡ ನಿರಾಸೆ ಅನುಭವಿಸಿತ್ತು. ಕಂಚಿನ ಹೋರಾಟದಲ್ಲಿ ಸ್ಪೇನ್ ವಿರುದ್ಧ 2-1 ಅಂತರ ಗೋಲುಗಳ ಜಯ ದಾಖಲಿಸಿದೆ. ಭಾರತದ ಪರ ತನ್ನ ಅಂತಿಮ ಪಂದ್ಯವನ್ನು ಆಡಿದ ಅನುಭವಿ ಗೋಲ್ಕೀಪರ್ ಪಿ.ಆರ್.ಶ್ರೀಜೇಶ್ ಉತ್ತಮ ಪ್ರದರ್ಶನ ತೋರಿದರು.
1968 ಮತ್ತು 1972 ರಲ್ಲಿ ಭಾರತವು ಕೊನೆಯ ಬಾರಿಗೆ ಒಲಿಂಪಿಕ್ಸ್ನಲ್ಲಿ ಬ್ಯಾಕ್ ಟು ಬ್ಯಾಕ್ ಹಾಕಿ ಪದಕಗಳನ್ನು ಗೆದ್ದಿತ್ತು. ಅದಾದ 52 ವರ್ಷಗಳ ಬಳಿಕ ಈಗ ಮತ್ತೊಮ್ಮೆ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದು ಇತಿಹಾಸ ಬರೆದಿದೆ.