ಪ್ಯಾರಿಸ್, ಆ 10(DaijiworldNews/MS): ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲುವ ಮೂಲಕ ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. 21ನೇ ವಯಸ್ಸಿವರಾದ ಅಮನ್ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಶುಕ್ರವಾರ ನಡೆದ 57 ಕೆಜಿ ಪುರುಷರ ಫ್ರಿ ಸ್ಟೈಲ್ ವಿಭಾಗದಲ್ಲಿ ಅಮನ್ ನಿಗದಿತ ಸಮಯದಲ್ಲಿ 13-5 ಅಂಕಗಳಿಂದ ಪೋರ್ಟೊ ರಿಕೊದ ಡೇರಿಯನ್ ಡೋಯಿ ಕ್ರೂಜ್ ಅವರನ್ನು ಮಣಿಸಿದರು. ಈ ಮೂಲಕ ಭಾರತ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆರನೇ ಪದಕವನ್ನು ತನ್ನದಾಗಿಸಿಕೊಂಡಿದೆ. ಅಮನ್ ಈ ಬಾರಿಯ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದ ಏಕೈಕ ಪುರುಷ ಕುಸ್ತಿ ಪಟು ಆಗಿದ್ದರು.
ಈ ಪದಕದೊಂದಿಗೆ ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಪದಕ ಗೆದ್ದುಕೊಟ್ಟ ಅತ್ಯಂತ ಕಿರಿಯ ಕ್ರೀಡಾಳು ಎಂಬ ದಾಖಲೆಯೊಂದು ಅಮನ್ ಹೆಸರಿಗೆ ಸೇರ್ಪಡೆಯಾಯಿತು.