ಪ್ಯಾರಿಸ್, ಆ.11(DaijiworldNews/AA): ಮಹತ್ವದ ಕ್ರೀಡಾಕೂಟವಾದ ಪ್ಯಾರಿಸ್ ಒಲಿಂಪಿಕ್ಸ್ಗೆ ಇಂದು ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಎಲ್ಲಾ ದೇಶಗಳ ಆಯ್ದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.
ಈ ಸಮಾರಂಭದಲ್ಲಿ "ನೂರಕ್ಕೂ ಹೆಚ್ಚು ಪ್ರದರ್ಶಕರು, ಅಕ್ರೋಬ್ಯಾಟ್ಗಳು, ನೃತ್ಯಗಾರರು ಮತ್ತು ಸರ್ಕಸ್ ಕಲಾವಿದರು" ಭಾಗವಹಿಸಲಿದ್ದಾರೆ. ಜೊತೆಗೆ ಅಂತಿಮ ಕಾರ್ಯಕ್ರಮದಲ್ಲಿ ಸಂಗೀತ ಪ್ರದರ್ಶನಗಳು ಇರಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತವು ಈವರೆಗೆ ೬ ಪದಕಗಳನ್ನು ಗೆದ್ದುಕೊಂಡಿದೆ. ಈ ಆರು ಪದಕಗಳಲ್ಲಿ ಮೂರು ಮೆಡಲ್ ಶೂಟಿಂಗ್ ಸ್ಪರ್ಧೆಯಲ್ಲಿ ಬಂದಿರುವುದು ವಿಶೇಷ. ಜೊತೆಗೆ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ, ಹಾಕಿಯಲ್ಲಿ ಕಂಚು, ಕುಸ್ತಿ ಫ್ರೀಸ್ಟೈಲ್ ನಲ್ಲಿ ಕಂಚು ಗೆದ್ದುಕೊಂಡಿದೆ.